ಕಾಂಗ್ರೆಸ್ ಪಕ್ಷದ ಗೆಲ್ಲುವ ಭ್ರಮೆ ನುಚ್ಚು ನೂರಾಗಲಿದೆ: ಕರಂದ್ಲಾಜೆ

ಸೋಮವಾರ, 3 ಏಪ್ರಿಲ್ 2017 (13:35 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲ್ಲುವ ಭ್ರಮೆ ನುಚ್ಚು ನೂರಾಗಲಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
 
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ, ಮತದಾರರು ಬಿಜೆಪಿ ಗೆಲ್ಲಿಸುವ ನಿರ್ಧಾರ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
 
ನಂಜನಗೂಡಿನಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದಂತೆ ಜನತೆ ಬಿಜೆಪಿ ಪರ ವಾಲುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
 
ಇಂದು ಚುನಾವಣೆ ಪ್ರಚಾರಕ್ಕಾಗಿ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ