ಪ್ರಚಾರಕ್ಕೆ ಆಗಮಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಗೆ ಚಳಿ ಬಿಡಿಸಿದ ಗ್ರಾಮಸ್ಥರು

ಗುರುವಾರ, 4 ಏಪ್ರಿಲ್ 2019 (16:24 IST)
ಚಿಕ್ಕಮಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ  ಪ್ರಚಾರಕ್ಕೆ ಆಗಮಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದ ಘಟನೆ ಹಿರೇಗೌಜ ಗ್ರಾಮದಲ್ಲಿ ನಡೆದಿದೆ.

ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಹಿರೇಗೌಜ ಗ್ರಾಮದಲ್ಲಿ ಪ್ರಚಾರಕ್ಕೆ ಆಗಮಿಸಿದ್ದರು. ಆ ವೇಳೆ ಗ್ರಾಮಸ್ಥರೆಲ್ಲಾ ಮುತ್ತಿಗೆ ಹಾಕಿ, ಇಷ್ಟು ದಿನ ಎಲ್ಲಿ ಹೋಗಿದ್ದೀರಿ. ಮತ ಕೇಳಲು ನಿಮಗೆ ಯಾವ ನೈತಿಕತೆ ಇದೆ. ನೀರು ಕೊಡದಿದ್ದರೆ ಯಾರಿಗೂ ಮತ ಹಾಕುವುದಿಲ್ಲ. ನೀರು ಕೊಟ್ಟ ನಂತರ ಗ್ರಾಮದೊಳಗೆ ಕಾಲಿಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

 

ಗ್ರಾಮಸ್ಥರ ಆಕ್ರೋಶ ಹೆಚ್ಚಾದ ಹಿನ್ನಲೆಯಲ್ಲಿ  ಶೋಭಾ ಅವರು ಅಲ್ಲಿಂದ ತೆರಳಿದ್ದಾರೆ. ಇದೇರೀತಿ ನಿನ್ನೆ ಕೂಡ ಶೋಭಾ ಕರಂದ್ಲಾಜೆ ಅವರಿಗೆ ಕಡೂರು ತಾಲೂಕಿನ ಬಿದರೆ ಗ್ರಾಮದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ