ಮೀಟೂ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಸಂಸದೆ ಶೋಭಾ ಕರಂದ್ಲಾಜೆ

ಶನಿವಾರ, 13 ಅಕ್ಟೋಬರ್ 2018 (14:25 IST)
ಬೆಂಗಳೂರು : ಮಹಿಳೆಯರು ತಮ್ಮ ಜೀವನದಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಗಳನ್ನು ಬಹಿರಂಗಪಡಿಸುವ  ಸಲುವಾಗಿ ಇರುವ ಮೀಟೂ(#MeToo) ಅಭಿಯಾನಕ್ಕೆ ಇದೀಗ ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಂಬಲ ಸೂಚಿಸಿದ್ದಾರೆ.


ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯ ವೇಳೆ ಈ ಬಗ್ಗೆ ಮಾತನಾಡಿದ ಅವರು ಕಾನೂನಿನ ಅಡಿಯಲ್ಲಿ ಮಹಿಳೆಯರಿಗೆ ನ್ಯಾಯ ಸಿಗಬೇಕು. ಕಾನೂನಿನಲ್ಲಿ ಮಹಿಳೆಯರಿಗೆ ನ್ಯಾಯ ಪಡೆಯುವ ಹಕ್ಕು ಇದೆ. ಈ ಮೂಲಕ ಅವರು ತಮ್ಮ ಅನ್ಯಾಯ ಹೊರಗಡೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.


ಈ ಹಿಂದೆಯೂ ಜಿಲ್ಲೆಗಳಲ್ಲಿ ಎಸ್ಪಿ ಕಚೇರಿಯಲ್ಲಿ ದೂರು ಕೇಂದ್ರ ತೆರೆಯಲಾಗಿತ್ತು. ನ್ಯಾಯ ಪಡೆಯಲು ಬೇರೆ ಬೇರೆ ವೇದಿಕೆಗಳಿವೆ. ತಪ್ಪಿತಸ್ಥರು ಯಾರು ಅಂತಾ ತನಿಖೆ ಮಾಡಿ ಕಾನೂನಿನಡಿ ಕ್ರಮ ಕೈಗೊಳ್ಳಬೇಕು. ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಯಾವುದೇ ಹೆಣ್ಣು ಮಕ್ಕಳಿಗೆ ಅನ್ಯಾಯವಾದರೆ ಹೇಳಿಕೊಳ್ಳಲು ವೇದಿಕೆ, ಸಂಸ್ಥೆ, ಕಾನೂನು ಇದೆ ಎಂದು ತಿಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ