ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್!

ಸೋಮವಾರ, 23 ಅಕ್ಟೋಬರ್ 2023 (14:21 IST)
ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್ ಎದುರಾಗಿದೆ.ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಹಲವು ಸೌಲಭ್ಯವೂ ಕಡಿತವಾಗಿದೆ.6  ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರವ ಕುಟುಂಬಗಳಿದೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಅನ್ನ  ಯೋಜನೆಯಡಿ ಪಡಿತರ ಪಡೆದುಕೊಳ್ಳದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.ರಾಜ್ಯದಲ್ಲಿ 1,16,95,029 ಬಿಪಿಎಲ್ ಕಾರ್ಡ್ ದಾರರಿದ್ದಾರೆ.ಆರು ತಿಂಗಳಿನಿಂದ 3.40 ಲಕ್ಷ ಕಾರ್ಡ್ ದಾರರು ಪಡಿತರ ಪಡೆದುಕೊಂಡಿಲ್ಲ.ಇಂತಹ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಸೂಚನೆ ನೀಡಿದೆ.ಪಡಿತರ ಪಡೆಯದ ಕಾರ್ಡ್ ದಾರರಿಗೆ ಯಾವುದೇ ನೋಟಿಸ್ ನೀಡದೆ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ.

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಚಿಕಿತ್ಸೆ ಪಡೆಯಲು ಪಿಂಚಣಿ ಸೌಲಭ್ಯ, ಆರ್‌ಟಿಇ ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ಕಾರ್ಡ್ ನಿಂದ ಅನುಕೂಲವಾಗಿದೆ.ಕಾರಣಾಂತರದಿಂದ ಕೆಲವರು ಪಡಿತರ ಪಡೆದುಕೊಳ್ಳುತ್ತಿಲ್ಲ.ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 60 ಕೋಟಿ ರೂ. ಉಳಿತಾಯವಾಗುತ್ತದೆ.ಹೀಗಿದ್ದರೂ ಪಡಿತರ ಪಡೆಯದವರ ಕಾರ್ಡ್ ರದ್ದು ಮಾಡುವುದರಿಂದ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯವಾಗುತ್ತದೆ.ಹಾಗೆಯೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಪಡೆಯದಂತಾಗಿದೆ.ಬುಧವಾರದಿಂದ ರದ್ಧತಿಯ ಕ್ರಮವನ್ನು ಇಲಾಖೆ ಮಾಡಲಿದೆ.ಇನ್ನು ಯಾವ ರೀತಿಯಲ್ಲಿ ರದ್ಧತಿ ಮಾಡಬೇಕು?ಮುಂದೆ ರದ್ಧತಿ ಆದವರೀಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವುದಕ್ಕೆ ಅನುಮತಿ ಕೊಡಬೇಕೋ ಬೇಡವೋ ಅನ್ನೋದು ಇಲಾಖೆ ಗಂಭೀರ ಚಿಂತನೆ ನಡೆಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ