ಆರ್ ಟಿ ಇ ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳಿಗೆ ಶಾಕಿಂಗ್ ನ್ಯೂಸ್

ಗುರುವಾರ, 6 ಡಿಸೆಂಬರ್ 2018 (12:08 IST)
ಬೆಂಗಳೂರು : ಆರ್ ಟಿ ಇ ಅಡಿ ಶುಲ್ಕ ವಿನಾಯತಿ ಮೂಲಕ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳ ಪೋಷಕರಿಗೊಂದು ಶಾಕಿಂಗ್ ನ್ಯೂಸ್.


ಅದೇನೆಂದರೆ ಇನ್ನುಮುಂದೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳಿಗೆ ಇನ್ಮುಂದೆ ಆರ್ ಟಿಇ ಅಡಿ ಶುಲ್ಕ ವಿನಾಯತಿ ಸಿಗುವುದಿಲ್ಲ. ಈ ಕುರಿತು ಕಾಯಿದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.


ಪೋಷಕರು ತಾವು ವಾಸಿಸುತ್ತಿರುವ ಸ್ಥಳದಲ್ಲಿ ಸರ್ಕಾರಿ ಶಾಲೆ ಇದ್ದರೂ ಅದನ್ನು ಬಿಟ್ಟು ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸುತ್ತಿದ್ದರು, ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಉಂಟಾದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದ್ದರಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಇದ್ದೂ, ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಆರ್ ಟಿಇ ಶುಲ್ಕ ವಿನಾಯಿತಿ ಸಿಗುವುದಿಲ್ಲ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ