ಶಾಕಿಂಗ್ ನ್ಯೂಸ್; ಲೋಕಸಭಾ ಚುನಾವಣೆಯ ಫಲಿತಾಂಶ ಮಧ್ಯಾಹ್ನದ ನಂತರ ಹೊರಬೀಳಲಿದೆ

ಬುಧವಾರ, 22 ಮೇ 2019 (09:23 IST)
ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ ಮಧ್ಯಾಹ್ನದ ನಂತರ ಹೊರಬೀಳುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.




ಮೇ 23ರಂದು ಬೆಳಿಗ್ಗೆಯಿಂದಲೇ ಮತ ಎಣಿಕೆ ನಡೆಯಲಿದ್ದು ಮೊದಲ ಫಲಿತಾಂಶವೇ 3 ಗಂಟೆಗೆ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿಂದೆ ನಡೆದ ಚುನಾವಣಾ ಫಲಿತಾಂಶಗಳು ಮಧ್ಯಾಹ್ನದೊಳಗೆ ಹೊರಬೀಳುತ್ತಿತ್ತು. ಆದರೆ ಈ ಬಾರಿ ವಿಳಂಬವಾಗಲಿದೆ ಎನ್ನಲಾಗಿದೆ.


ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಪ್ರತಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5 ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಿ ಇವಿಎಂ ಫಲಿತಾಂಶದೊಂದಿಗೆ ತಾಳೆ ಮಾಡಲಾಗುವುದು. ಈ ಕಾರಣದಿಂದ ಫಲಿತಾಂಶ ಸುಮಾರು 4 ಗಂಟೆ ವಿಳಂಬವಾಗಲಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೊದಲ ಫಲಿತಾಂಶ ಹೊರಬರಲಿದ್ದು ಸಂಜೆ 6 ಗಂಟೆಯ ವೇಳೆಗೆ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ