ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Sampriya

ಶನಿವಾರ, 19 ಏಪ್ರಿಲ್ 2025 (15:23 IST)
Photo Credit X
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ನಡೆದಿರುವ ಗುಂಡಿನ ದಾಳಿ ಬಗ್ಗೆ ವಕೀಲ, ಮುತ್ತಪ್ಪ ರೈ ಆಪ್ತ ಪ್ರಕಾಶ್ ರೈ ಅವರು ಪ್ರತಿಕ್ರಿಯಿಸಿ ಅವರ ಕುಟುಂಬದ ಮೇಲೆ ಸಾಕಷ್ಟು ಮಂದಿಗೆ ದ್ವೇಷವಿದೆ ಎಂದು ಹೇಳಿದರು.

ಸೆಕ್ಯುರಿಟಿ ನನಗೆ ರಾತ್ರಿ ಕರೆ ಮಾಡಿ ವಿಚಾರ ತಿಳಿಸಿದ್ರು. ಮುತ್ತಪ್ಪ ರೈ ಕಾಲದಿಂದಲೂ ಅವರ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಒಂದಷ್ಟು ವಿವಾದವಿತ್ತು. ರಿಕ್ಕಿ ಹೆಚ್ಚಿನ ಸಮಯ ಬಿಡದಿಯಲ್ಲಿ ಕಳೆಯುತ್ತಿದ್ರು. ಬೆಂಗಳೂರಿನ ಸದಾಶಿವ ನಗರದಲ್ಲೂ ಮನೆ ಇದೆ. ಬಿಡದಿ ಮನೆಯಲ್ಲಿ ಇಂಟೀರಿಯರ್ ಕೆಲಸ ನಡೆಯುತ್ತಿತ್ತು. ಅದನ್ನೂ ನೋಡೊಕೆ ರಿಕ್ಕಿ ಬಂದಿದ್ರು. ರಾತ್ರಿ ಇಲ್ಲಿಂದ ಹೋಗುವಾಗ ಯಾರೋ ಅಟ್ಯಾಕ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದೀಗ ಮುತ್ತಪ್ಪ ರೈ ಮೇಲಿನ ದ್ವೇಷ ಮಗನ ಮೇಲೂ ಮುಂದುವರೆದಿದೆ. ಯಾರೋ ಟಾರ್ಗೆಟ್ ಮಾಡಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ. ರಿಕ್ಕಿ ರೈ ಅವರಿಗೆ ಮುತ್ತಪ್ಪ ರೈ ಅವರು ಇದ್ದಾಗಲೇ ಮೊದಲ ಪತ್ನಿಯಿಂದ ವಿಚ್ಛೇಧನ ಪಡೆದಿದ್ದರು. 2ನೇ ಪತ್ನಿ ವಿದೇಶದವರು, ಅವರು ಮಗು ಜೊತೆ ವಿದೇಶದಲ್ಲೇ ಇದ್ದಾರೆ. ರಿಕ್ಕಿ ರೈ ಕೂಡ ಹೆಚ್ಚಿನ ಸಮಯ ವಿದೇಶದಲ್ಲೇ ಕಳೆಯುತ್ತಿದ್ರು ಅಂತ ಪ್ರಕಾಶ್‌ ರೈ ಹೇಳಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ