ಡಿ.ಕೆ.ಶಿವಕುಮಾರ್ ಗೆ ಅವಮಾನ ಆಗಬಾರದು. ಅದನ್ನ ನಾನು ಸಹಿಸಲ್ಲ- ಅತೃಪ್ತ ಶಾಸಕ ಸೋಮಶೇಖರ್ ಹೇಳಿಕೆ
ಬುಧವಾರ, 10 ಜುಲೈ 2019 (12:49 IST)
ಮುಂಬೈ : ಡಿ.ಕೆ.ಶಿವಕುಮಾರ್ ಅವರಿಗೆ ಯಾವ ರೀತಿಯ ಅವಮಾನ ಕೂಡ ಆಗಬಾರದು. ಅದನ್ನು ನಾನು ಸಹಿಸುವುದಿಲ್ಲ ಎಂದು ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಅತೃಪ್ತ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಮುಂಬೈ ಹೋಟೆಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದ ವಿಷಯದಲ್ಲಿ ಸದ್ಯಕ್ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಇಷ್ಟು ಉನ್ನತ ಸ್ಥಾನಕ್ಕೆ ನಮ್ಮನ್ನು ಶಿವಕುಮಾರ್ ಅವರೇ ಕರೆತಂದಿದ್ದು, ರಾಜಕಾರಣದಲ್ಲಿ ಏನೆಲ್ಲ ಸಹಾಯ ಮಾಡಬೇಕೋ ಅವರು ಮಾಡಿದ್ದಾರೆ. ಆ ದೃಷ್ಟಿಯಿಂದ ಶಿವಕುಮಾರ್ ಸೇರಿದಂತೆ ಯಾರನ್ನೂ ಭೇಟಿ ಮಾಡಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ಬಂದ ನಂತರ ಮೊದಲು ಶಿವಕುಮಾರ್ ಅವರನ್ನು ಭೇಟಿ ಮಾಡಿ ವಾಸ್ತವ ಸ್ಥಿತಿ ಏನಿದೆ ಎಂಬುದನ್ನು ಹೇಳುವ ಕೆಲಸ ಮಾಡುತ್ತೇವೆ. ದಯವಿಟ್ಟು ಬಾಂಬೆಯಲ್ಲಿ ಶಿವಕುಮಾರ್ ಅವರಿಗೆ ಯಾವ ರೀತಿಯ ಅವಮಾನ ಕೂಡ ಆಗಬಾರದು. ಅದನ್ನು ನಾವು ಕೂಡ ಸಹಿಸಲ್ಲ ಎಂದು ಸೋಮಶೇಖರ್ ತಿಳಿಸಿದ್ದಾರೆ.