ಭ್ರಷ್ಟಾಚಾರದ ದಾಖಲೆಯಿದ್ದರೆ ತೋರಿಸಿ– ಮೋದಿಗೆ ಸಿದ್ದರಾಮಯ್ಯ ಸವಾಲು

ಶನಿವಾರ, 24 ಫೆಬ್ರವರಿ 2018 (17:48 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಅಭಿವೃದ್ಧಿಯ ಬಗ್ಗೆ ಮಾತನಾಡದೇ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಐಟಿ ಹಾಗೂ ಸಿಬಿಐ ಇದೆ, ದಾಖಲಾತಿಯಿದ್ದರೆ ತೋರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಥಣಿಯಲ್ಲಿ ನಡೆದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ನೀರವ್ ಮೋದಿ 11 ಸಾವಿರ ಕೋಟಿ ಲೂಟಿ ಮಾಡಲು ನರೇಂದ್ರ  ಮೋದಿ ಸಹಕಾರ ಇಲ್ಲದೆ ನಡೆಯಲು ಸಾಧ್ಯವಿಲ್ಲ. ಜೈಲಿಗೆ ಹೋಗಿಬಂದ ಯಡಿಯೂರಪ್ಪ ಹಾಗೂ ಅಮಿತ್ ಶಾ ಅವರ‌ನ್ನು ಮುಂದಿಟ್ಟುಕೊಂಡ ಮತ ಕೇಳಲು ನಾಚಿಕೆಯಾಗಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಲಲಿತ್ ಮೋದಿ, ವಿಜಯಮಲ್ಯ, ನೀರವ್ ಮೋದಿ ಹಣ ಲೂಟಿ ಮಾಡಲು ಮೋದಿಯವರು ಸಹಾಯ ಮಾಡಿಲ್ಲವೇ ಎಂದ ಅವರು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಶೇ90 ರಷ್ಟು ಕಮಿಷನ್ ಸರ್ಕಾರವಾಗಿದ್ದು, ಪ್ರಧಾನಿಯಾಗಲು ನರೇಂದ್ರ ಮೋದಿ ನಾಲಾಯಕ್ ಎಂದಿದ್ದಾರೆ.
 
ಮಹಾ ಮಸ್ತಕಾಭಿಷೇಕಕ್ಕೆ ಕೇಂದ್ರ ಸರ್ಕಾರ ಒಂದು ರೂಪಾಯಿ ಕೂಡ ನೀಡಿಲ್ಲ. ಜೈನ ಸಮುದಾಯದವರಿಗೆ ಹೆಚ್ಚಿನ ಅನುದಾನ ನೀಡಿರುವುದು ನಮ್ಮ ಸರ್ಕಾರ ಮಾತ್ರ ಎಂದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ