ಹೆಣ್ಣು ಮಕ್ಕಳ ಮೇಲೆ ಕನಿಷ್ಠ ಕನಿಕರವೂ ಇಲ್ಲವೇ? : ಕುಮಾರಸ್ವಾಮಿ ಪ್ರಶ್ನೆ

ಮಂಗಳವಾರ, 21 ಮಾರ್ಚ್ 2017 (11:57 IST)
ಬೆಂಗಳೂರು:  ಹೆಣ್ಣು ಮಕ್ಕಳು ರಾತ್ರಿಯಿಡೀ ರಸ್ತೆಯಲ್ಲಿ ಮಲಗಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರಿನ ಸೌಲಭ್ಯ ಕೂಡಾ ಇಲ್ಲ. ಹೆಣ್ಣು ಮಕ್ಕಳ ಮೇಲೆ ಕನಿಷ್ಠ ಕನಿಕರವಾದರೂ ಬೇಡವೇ? ಹೀಗೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.


 
ಅಂಗನವಾಡಿ ಕಾರ್ಯಕರ್ತರ ಅಹೋರಾತ್ರಿ ಪ್ರತಿಭಟನೆ ಬಗ್ಗೆ ಇಂದು ಸದನದಲ್ಲಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

 
ಬೇಕಾದರೆ ಗುಂಡು ಹಾರಿಸಿ, ಇಲ್ಲಿಂದ ತೆರಳುವುದಿಲ್ಲ ಎಂದು ಹೆಣ್ಣು ಮಕ್ಕಳು ಹಠಕ್ಕೆ ಬಿದ್ದಿದ್ದಾರೆ. ಅವರ ಬೇಡಿಕೆ ಈಡೇರಿಸುವತ್ತ ಗಮನ ಹರಿಸಿ ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ