KSRTC ಚಾಲಕರಿಗೆ ಹೂಮಳೆ ಸುರಿಸಿ ಗೌರವ

ಭಾನುವಾರ, 24 ಸೆಪ್ಟಂಬರ್ 2023 (19:26 IST)
ಬಾಗಲಕೋಟೆ ಜಿಲ್ಲೆಯ ಸುಮಾರು 46 ಮಂದಿ KSRTC ಚಾಲಕರಿಗೆ ಹೂಮಳೆ ಸುರಿಸಿ ಗೌರವ ಸಮರ್ಪಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 25ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಚಾಲಕರಿಗೆ ಗೌರವ ಸಲ್ಲಿಸಲಾಗಿದೆ. ಇನ್ನು, ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರೋ ಚಾಲಕರಿಗೆ ಬೆಳ್ಳಿ ಪದಕ ನೀಡಿ ಗೌರವ ಸಲ್ಲಿಸಲು ವಿಶೇಷ ಸನ್ಮಾನ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆಯಲಿರೋ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಗೌರವಿಸಲಾಗಿದ್ದು, ಹುಬ್ಬಳ್ಳಿಯಲ್ಲಿ ನಡೆಯಲಿರೋ ಕಾರ್ಯಕ್ರಮಕ್ಕೆ ಬಾಗಲಕೋಟೆಯಿಂದ 46 ಜನ ಸಾಧಕ ಚಾಲಕರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ