ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಇಂದಿನಿಂದ ಶನಿವಾರದವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.