ಮೇಲುಕೋಟೆಯಲ್ಲಿ ಶ್ರೀ ವೈರಮುಡಿ ಕಿರೀಟ ಧಾರಣ ಮಹೋತ್ಸವ : ಸಿದ್ಧತೆ ಶುರು

ಗುರುವಾರ, 27 ಫೆಬ್ರವರಿ 2020 (21:15 IST)
ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆಗಳು ಶುರುವಾಗಿವೆ.

ಮೇಲುಕೋಟೆಯಲ್ಲಿ ಏಪ್ರಿಲ್  2 ರಂದು ನಡೆಯಲಿರುವ ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಸೂಚಿಸಿದರು.

ಶ್ರೀ ಚಲುವನಾರಾಯಣಸ್ವಾಮಿ ವೈರಮುಡಿ ಕಿರೀಟಧಾರಣ ಬ್ರಹ್ಮೋತ್ಸವ-2020ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಮಾರ್ಚ್ 28 ರಿಂದ   ಏಪ್ರಿಲ್‌ 9 ರವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಏಪ್ರಿಲ್ 2 ರಂದು ಶ್ರೀವೈರಮುಡಿ ಕಿರೀಟಧಾರಣ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಶ್ರೀಕ್ಷೇತ್ರದಲ್ಲಿ ಕುಡಿಯುವ ನೀರು ಸರಬರಾಜು ಮಾಡುವುದು ಹಾಗೂ ಅಗತ್ಯವಾದ ಮೂಲ ಸೌಕರ್ಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು.

ವೈರಮುಡಿ ಉತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಶುದ್ಧವಾದ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಆಂಬ್ಯುಲೆನ್ಸ್‌ ವ್ಯವಸ್ಥೆ ಹಾಗೂ ಶಾಂತಿ ಸುವ್ಯವಸ್ಥೆ ಪಾಲನೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳು ಕಾಳಜಿವಹಿಸಬೇಕು ಎಂದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ