ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದಿಂದ ಅಸಮಾಧಾನಗೊಂಡ ನಾಯಕರಿಗೆ ಮಣೆ ಹಾಕುತ್ತಿದ್ದು, ಇಂದು ಜೆಡಿಎಸ್ ಪಕ್ಷಕ್ಕೆ ಬರುವಂತೆ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರಿಗೆ ಆಹ್ವಾನ ನೀಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಂವಿ ಎಕ್ಸ್‌ಟೆನ್ಷನ್‌ನಲ್ಲಿರುವ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆಸಿದರು. ಹಾಗೂ ಜೆಡಿಎಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.