ಸಿಯಾಚಿನ್ ಪ್ರದೇಶ ಚೀನಾ ದೇಶದಲ್ಲಿದೆ ಎಂದು ಟ್ವೀಟ್ ಮಾಡಿದ ಸಿಎಂ
ಗುರುವಾರ, 22 ಡಿಸೆಂಬರ್ 2016 (16:14 IST)
ಭಾರತೀಯ ಸೈನಿಕರು ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸುತ್ತಿರುವ ಸಿಯಾಚಿನ್ ಪ್ರದೇಶ ಚೀನಾ ದೇಶದಲ್ಲಿದೆ ಎಂದು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಜುಗರಕ್ಕೀಡಾದ ಕುರಿತು ವರದಿಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‍ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
ಚೀನಾದ ಸಿಚಿವಾನ್ ಎಂಬ ಪ್ರಾಂತ್ಯದ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತ್ತು. ಬೆಂಗಳೂರಿನ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಸಿಎಂ ಸಿದ್ದರಾಮಯ್ಯ ಚೀನಾ ನಿಯೋಗದೊಂದಿಗೆ ಚರ್ಚೆ ನಡೆಸಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಿಬ್ಬಂದಿ ಸಭೆಯ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದು, ಸಿಚುವಾನ್ ಎಂದು ಬರೆಯುವ ಬದಲು ಸಿಯಾಚಿನ್ ಎಂದು ಬರೆದು ಎಡವಟ್ಟು ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.
ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾದ ನಂತರ ಸಿಎಂ ಮಾಧ್ಯಮ ವಿಭಾಗದ ಸಿಬ್ಬಂದಿ ಟ್ವೀಟ್‌ನ್ನು ತೆಗೆದು ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ