ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ: ಸರ್ಕಾರದ ನಿರ್ಧಾರ ಸ್ವಾಗತಿಸಿದ ಸಿದ್ಧಗಂಗಾ ಮಠ

ಮಂಗಳವಾರ, 20 ಮಾರ್ಚ್ 2018 (12:12 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸಿರುವುದನ್ನು ಸಿದ್ಧಗಂಗಾ ಮಠದ ಕಿರಿಯ ಶ್ರೀ ಸಿದ್ಧಲಿಂಗಸ್ವಾಮೀಜಿ ಸ್ವಾಗತಿಸಿದ್ದಾರೆ.

 
ಮಾಧ್ಯಮಗಳೆದುರು ಮಾತನಾಡಿದ ಸ್ವಾಮೀಜಿ ವೀರಶೈವ ಮತ್ತು ಲಿಂಗಾಯತ ಎರಡೂ ಹಿಂದೂ ಧರ್ಮದ ಭಾಗವೇ. ಪ್ರತ್ಯೇಕ ಧರ್ಮವಾದರೂ ಆಚರಣೆಗಳು ಬೇರೆಯಾಗಲ್ಲ. ಬಸವಣ್ಣನವರ ದೃಷ್ಟಿಯಲ್ಲಿ ಎಲ್ಲವೂ ಒಂದೇ ಎಂದಿದ್ದಾರೆ.

ಇದೀಗ ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು ಕೇಂದ್ರದ ನಿರ್ಧಾರವನ್ನು ಕಾದು ನೋಡೋಣ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ