ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀ
ಇದೀಗ ಶ್ರೀಗಳ ಆರೋಗ್ಯ ಸಂಪೂರ್ಣ ಸುಧಾರಿಸಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ತಂಡ ಹೇಳಿದೆ. ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡಿತ್ತು. ಕೆಲವು ತಿಂಗಳುಗಳ ಹಿಂದೆ ಕೂಡಾ ಶ್ರೀಗಳು ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.