ಅಸ್ಸಾಂ ಚುನಾವಣೆ ತಯಾರಿ ನೆಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ಬಜೆಟ್ ಕುರಿತು ಇಂದು ಸಭೆ ಇದ್ದರೂ ಅದನ್ನು ಬಿಟ್ಟು ಅವರು ಪ್ರಿಯಾಂಕ ಗಾಂಧಿ ಕರೆದಿರುವ ಸಭೆಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಈಗ ಮತ್ತೊಮ್ಮೆ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿದೆ. ಹೀಗಾಗಿ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ ಎನ್ನಲಾಗುತ್ತಿದೆ.