ಇಂದು ಚುನಾವಣೆಯ ಟಿಕೆಟ್ಗೆ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ

ಸೋಮವಾರ, 21 ನವೆಂಬರ್ 2022 (16:37 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದಾರೆ.
 
ಸಿದ್ದರಾಮಯ್ಯ ಪರವಾಗಿ ಅವರ ಆಪ್ತ ಸಹಾಯಕ ವೆಂಕಟೇಶ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಎಲ್ ನಾರಾಯಣ್ ಅವರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆದರೆ ಸಿದ್ದರಾಮಯ್ಯ ಅರ್ಜಿ ಬೇರೆಲ್ಲ ನಾಯಕರ ಅರ್ಜಿಗಿಂತ ಭಿನ್ನವಾಗಿದ್ದು ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ತಮಗೆ ಯಾವ ಕ್ಷೇತ್ರದ ಟಿಕೆಟ್ ನೀಡಬೇಕು ಎಂಬ ಜವಾಬ್ದಾರಿಯನ್ನು ಹೈಕಮಾಂಡ್ಗೆ ಬಿಟ್ಟಿದ್ದಾರೆ.

ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೆಯ ದಿನವಾಗಿತ್ತು. ಆದರೆ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ಅರ್ಜಿ ಸಲ್ಲಿಸಿರಲಿಲ್ಲ. ಅಷ್ಟೇ ಅಲ್ಲದೇ ಕೊನೆಯ ಕ್ಷಣದಲ್ಲಿ ಟಿಕೆಟ್ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ನ.21ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ