ಬೆಂಗಳೂರು: ಈ ಹಿಂದೆ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ಮೇಲೆ ಆರೋಪ ಬಂದಾಗ ಇದೇ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ತನಿಖಾ ಸಂಸ್ಥೆಗಳೆಲ್ಲಾ ಅವರ ಕೈಯಲ್ಲಿರುವ ಕಾರಣ ರಾಜೀನಾಮೆ ಕೊಡಬೇಕು ಎಂದಿದ್ದರು! ಆದರೆ ಈಗ ತಮ್ಮ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಅಂತಿದ್ದಾರೆ.
ಈ ಹಿಂದೆ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಬಂದಾಗ ಪತ್ರಿಕಾಗೋಷ್ಠಿ ನಡೆಸಿದ್ದ ಸಿದ್ದರಾಮಯ್ಯ, ಈಗ ಚೀಫ್ ಮಿನಿಸ್ಟರ್ ಯಾರು? ಯಾರ ಕೈಯಲ್ಲಿ ಆಡಳಿತವಿದೆ? ಹಾಗಿದ್ದ ಮೇಲೆ ಯಾರು ರಾಜೀನಾಮೆ ಕೊಡಬೇಕು? ಎಂದು ತಮ್ಮದೇ ಶೈಲಿಯಲ್ಲಿ ಟಾಂಗ್ ಕೊಟ್ಟಿದ್ದರು.
ಸಿಎಂ ಆಗಿದ್ದ ಯಡಿಯೂರಪ್ಪ ಕೈಯಲ್ಲೇ ತನಿಖಾ ಸಂಸ್ಥೆಗಳಿರುವುದರಿಂದ ತನಿಖೆ ದಿಕ್ಕು ತಪ್ಪಿಸುವ ಕೆಲಸ ಆಗಬಹುದು. ಹೀಗಾಗಿ ಯಡಿಯೂರಪ್ಪ ರಾಜೀನಾಮೆ ನೀಡಲೇಬೇಕು ಎಂದು ಸಿದ್ದರಾಮಯ್ಯ ಒತ್ತಾಯ ಮಾಡಿದ್ದರು. ಆದರೆ ಈಗ ತಮ್ಮ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಡುವುದೇ ಇಲ್ಲ ಎಂದಿದ್ದಾರೆ.
ಅಂದು ಯಡಿಯೂರಪ್ಪನವರ ಪರಿಸ್ಥಿತಿಯೂ ಇಂದು ಸಿದ್ದರಾಮಯ್ಯನವರ ಪರಿಸ್ಥಿತಿಯೂ ಒಂದೇ. ಅಂದು ಯಡಿಯೂರಪ್ಪನವರ ರಾಜೀನಾಮೆ ಕೇಳಿದ್ದ ಇದೇ ಸಿದ್ದರಾಮಯ್ಯನವರು ಇಂದು ರಾಜೀನಾಮೆಯೇ ನೀಡಲ್ಲ ಎನ್ನುತ್ತಿರುವುದು ವಿಪರ್ಯಾಸ.