ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಆರ್ ಅಶೋಕ್ ನೇತೃತ್ವದಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೆ, ಟ್ವೀಟ್ ಮೂಲಕವೂ ಆರ್ ಅಶೋಕ್ ಈ ಹಿಂದಿನ ಘಟನೆಯನ್ನು ಉಲ್ಲೇಖಿಸಿ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಇಂತಹ ಹೇಳಿಕೆ ನೀಡುವ ಮೂಲಕ ಅಶೋಕ್ ತಮ್ಮ ಅಜ್ಞಾನ ಪ್ರದರ್ಶಿಸಿದ್ದಾರೆ. ಹಿಂದೆ ಯಡಿಯೂರಪ್ಪನವರು ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ ಇದೇ ಅಶೋಕ್ ಈಗ ಯಾವ ನಾಲಿಗೆ ಇಟ್ಟುಕೊಂಡು ನನ್ನ ರಾಜೀನಾಮೆ ಕೇಳ್ತಿದ್ದೀರಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಅಶೋಕ್ ಸ್ವಲ್ಪ ವಾಸ್ತವಾಂಶ ತಿಳಿದುಕೊಂಡು ಮಾತನಾಡಲಿ. ಹಿಂದೆ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದು 2011 ರ ಆಗಸ್ಟ್ 4 ರಂದು. ಆಗ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ವರದಿ ಕೊಟ್ಟ ಬಳಿಕ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರು. ಆಗ ಆರೋಪ ಪಟ್ಟಿ ಸಲ್ಲಿಸಿದ್ದ ಸಂತೋಷ್ ಹೆಗ್ಡೆಯವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಕ್ರಮ ಸರಿಯಾಗಿತ್ತು ಎಂದಿದ್ದರು. ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧ ಏನೆಲ್ಲಾ ಕುತಂತ್ರ ಮಾಡಿದಿರಿ ಎಂದು ಗೊತ್ತಿದೆ ಎಂದಿದ್ದಾರೆ. ಅವರ ಟ್ವೀಟ್ ಇಲ್ಲಿದೆ ನೋಡಿ.