ಮುಡಾ ಸೊಳ್ಳೆಯಿಂದ ಕಚ್ಚಿಸಿಕೊಂಡ ಸಿದ್ದರಾಮಯ್ಯಗೆ ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ: ಅಶ್ವತ್ಥನಾರಾಯನ್

Sampriya

ಮಂಗಳವಾರ, 9 ಜುಲೈ 2024 (14:46 IST)
Photo Courtesy X
ಬೆಂಗಳೂರು: ನಗರ ಸೇರಿದಂತೆ ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಮುಡಾ ಸೊಳ್ಳೆಯಿಂದ ಕಚ್ಚಿಸಿಕೊಂಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯನ್ ಅವರು ಲೇವಾಡಿ ಮಾಡಿದರು.

ಅವರು ಇಂದು ಡೆಂಗ್ಯೂ ಹರಡುವಿಕೆ ಕುರಿತು ಪರಿಶೀಲಿಸಲು ಓಕಳಿಪುರಂ ಚರ್ಚ್ ಬಳಿ ಇರುವ ಕೊಳೆಗೇರಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು.

ಡೆಂಗ್ಯೂ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಮತ್ತು ಬಿಬಿಎಂಪಿ ನಿರ್ಲಕ್ಷ್ಯ ವಹಿಸಿದ್ದು, ಸಿಎಂ ಮಾತ್ರ ಮುಡಾ ಸೊಳ್ಳೆ ಕಚ್ಚಿಸಿಕೊಂಡಿದ್ದಾರೆ. ಇದರ ಜತೆಗೆ ಅವರಿಗೆ ವಾಲ್ಮೀಕಿ ನಿಗಮದ ಹಗರಣ ಭಾಧಿಸುತ್ತಿದ್ದು, ಡೆಂಗ್ಯೂ ಸೊಳ್ಳೆ ಯಾರಿಗೆ ಕಚ್ಚಿದರೆ ನನಗೇನು ಎಂಬ ರೀತಿಯಲ್ಲಿ ಅವರು ವರ್ತಿಸುತ್ತಿದ್ದಾರೆ ಎಂದು ದೂರಿದರು.

ಅನುಭವವುಳ್ಳ ಸಿಎಂ ಸಿದ್ದರಾಮಯ್ಯ ಅವರು ಇದುವರೆಗೂ ಈ ಸಂಬಂಧ ಒಂದು ಸಭೆಯನ್ನು ಕರೆದಿಲ್ಲ. ಅವರನ್ನು ಬಾಧಿಸುತ್ತಿದೆ. ಡೆಂಗ್ಯೂ ಸೊಳ್ಳೆ ಯಾರಿಗೆ ಕಚ್ಚಿದರೆ ನನಗೇನು ಎಂಬ ರೀತಿಯಲ್ಲಿ ಅವರು ಇವತ್ತು ವರ್ತಿಸುತ್ತಿದ್ದಾರೆ. ಇಷ್ಟು ಅನುಭವವಿರುವ ಸಿಎಂ ಒಂದು ಸಭೆ ಮಾಡಿದ್ದಾರಾ, ಡೆಂಗ್ಯೂ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿವೆ. ಸೊಳ್ಳೆ ನಿಯಂತ್ರಣಕ್ಕೆ ಗಮನ ಕೊಡುತ್ತಿಲ್ಲ. ಎಲ್ಲೆಡೆ ಡೆಂಗ್ಯೂ, ಚಿಕೂನ್‍ಗುನ್ಯ ಸೊಳ್ಳೆಗಳು ಮಾರಕವಾಗಿವೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ