ಬೆಂಗಳೂರು: ಸಿದ್ದರಾಮಯ್ಯ ಮೇಲೆ ಮುಡಾ ಹಗರಣದ ವಿಚಾರವಾಗಿ ರಾಜ್ಯಪಾಲರು ತನಿಖೆಗೆ ಆದೇಶಿಸುತ್ತಿದ್ದಂತೇ ಇತ್ತ ಅವರ ಆಪ್ತ ಬಳಗದಲ್ಲಿ ತಳಮಳ ಶುರುವಾಗಿದೆ. ಸಿದ್ದರಾಮಯ್ಯ ಪರವಾಗಿ ಈಗ ಹೈಕಮಾಂಡ್ ಮುಂದೆ ಲಾಬಿ ನಡೆಸಲು ಮುಂದಾಗಿದ್ದಾರೆ.
ಮುಡಾ ಹಗರಣ ವಿಚಾರವಾಗಿ ಹೈಕಮಾಂಡ್ ಸಿದ್ದರಾಮಯ್ಯರಿಂದ ಅಂತರ ಕಾಯ್ದುಕೊಂಡಿದೆ. ಈ ನಡುವೆ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಮಾತುಕತೆಯನ್ನೂ ನಡೆಸಿದ್ದಾರೆ. ಇದೆಲ್ಲದರ ನಡುವೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದರೆ ಎಂಬ ತಲ್ಲಣ ಸಿದ್ದು ಆಪ್ತರಿಗೆ ಶುರುವಾಗಿದೆ.
ಈ ಕಾರಣಕ್ಕೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಬೇಡಿ ಎಂದು ಅವರ ಪರವಾಗಿ ವಾದ ಮಂಡಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯರನ್ನು ಯಾಕೆ ಕಿತ್ತು ಹಾಕಬಾರದು ಎಂದು ಅವರ ಪರ ಆಪ್ತರು ಹೈಕಮಾಂಡ್ ಗೆ ಮನದಟ್ಟು ಮಾಡಲಿದ್ದಾರೆ.
ಸಿದ್ದರಾಮಯ್ಯ ಪರ ಹೈಕಮಾಂಡ್ ನಿಲ್ಲಬೇಕು. ಅವರು ಯಾವುದೇ ಅಕ್ರಮವೆಸಗಿಲ್ಲ. ಇದೆಲ್ಲಾ ಬಿಜೆಪಿ ಪಿತೂರಿ ಎಂದು ಹೈಕಮಾಂಡ್ ಗೆ ಮನದಟ್ಟು ಮಾಡಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯರನ್ನು ಕೆಳಗಿಳಿಸಿದರೆ ಸರ್ಕಾರಕ್ಕೇ ಸಂಚಕಾರ ಬರಬಹುದು ಎಂದು ವಾದಿಸಲಿದ್ದಾರೆ.