ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ

ಶುಕ್ರವಾರ, 6 ಜನವರಿ 2023 (10:20 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿರುವ ಹೇಳಿಕೆಯನ್ನು ನಾನು ಸದುದ್ದೇಶದಿಂದ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಧೈರ್ಯ ತೋರಿಸಬೇಕೆಂದು ಹೇಳಿದ್ದೇನೆ. ಕೇಂದ್ರ ಸರ್ಕಾರದಿಂದ ಅನುದಾನ ಸರಿಯಾಗಿ ಬಂದಿಲ್ಲ. ಅನುದಾನ ಎಲ್ಲ ಕಡಿಮೆಯಾಗಿದೆ. ಆ ಅರ್ಥದಲ್ಲಿ ಹೇಳಿದ್ದೇನೆ ಹೊರತು ಬೇರೆ ಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.

ನಾಯಿಮರಿಗೆ ಪ್ರತಿಯಾಗಿ ಸಚಿವ ಶ್ರೀರಾಮುಲು ಅವರು, ಸಿದ್ದರಾಮಯ್ಯರನ್ನು ಬೆಕ್ಕು, ಇಲಿಗೆ ಹೋಲಿಸಿದ್ದಕ್ಕೆ ಗರಂ ಆದ ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಅವರ್ಯಾರು ಪೆದ್ದ. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ