ಬಿಜೆಪಿ ಅಭ್ಯರ್ಥಿಗಳು ಬುರ್ಖಾ ಹಾಕಿಕೊಂಡು ಪ್ರಚಾರಕ್ಕೆ ಬರಲಿ ಎಂದು ಸಿದ್ಧರಾಮಯ್ಯ ಹೇಳಿದ್ಯಾಕೆ?

ಭಾನುವಾರ, 7 ಏಪ್ರಿಲ್ 2019 (14:05 IST)
ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳು ಬುರ್ಖಾ ಹಾಕಿಕೊಂಡು ಪ್ರಚಾರಕ್ಕೆ ಬರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.


ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ ಪರ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಸಂಸದರು ಏನು ಕೆಲಸ ಮಾಡಿಲ್ಲ. ಹೀಗಾಗಿ ಪ್ರಧಾನಿ ಮೋದಿ ಮುಖ ನೋಡಿಕೊಂಡು ಮತ ಹಾಕಿ ಎಂದು ಬಿಜೆಪಿ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ. ಆದ್ದರಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಎಂಬ ಸ್ಲೋಗನ್ ಜೊತೆ ಕಣಕ್ಕಿಳಿದಿರುವ ಬಿಜೆಪಿಗರು ಬುರ್ಖಾ ಹಾಕಿಕೊಂಡು ಪ್ರಚಾರಕ್ಕೆ ಬರಲಿ ಎಂದು ವ್ಯಂಗ್ಯವಾಡಿದ್ದಾರೆ.


ಇನ್ನು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸದಾನಂದಗೌಡ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಸದಾನಂದಗೌಡ ಅರೆಭಾಷೆ ಒಕ್ಕಲಿಗರು, ಪುತ್ತೂರಿನ ಸುಳ್ಯದವರು, ಹೀಗಾಗಿ ಅವರನ್ನು ಚುನಾವಣೆಯಲ್ಲಿ ಸೋಲಿಸಿ, ಅವರನ್ನು ಅಲ್ಲಿಗೆ ಓಡಿಸಿ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ