‘ಪುಕ್ಕಟೆ ಪ್ರಚಾರಕ್ಕಾಗಿ ಸಿದ್ದರಾಮಯ್ಯ, ಡಿಕೆಶಿ ಟೀಕೆ’

ಶುಕ್ರವಾರ, 17 ಜುಲೈ 2020 (18:56 IST)
ಪುಕ್ಕಟೆ ಪ್ರಚಾರಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಬಾರದು.

ಹೀಗಂತ ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಮ್ಮ ಕಾರ್ಯವೈಖರಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಪುಕ್ಕಟೆ ಪ್ರಚಾರಕ್ಕಾಗಿ ಟೀಕೆ ಮಾಡಬೇಡಿ ಎಂದರು.

ರಾಜ್ಯ ಸರ್ಕಾರ ಕೋವಿಡ್ – 19 ಸೂಕ್ತ ರೀತಿಯಲ್ಲಿ ಎದುರಿಸುತ್ತಿದೆ ಎಂದಿದ್ದಾರೆ.

ರಾಜ್ಯ ಸರ್ಕಾರದೊಂದಿಗಿನ ಖಾಸಗಿ ಆಸ್ಪತ್ರೆಗಳ ಒಡಂಬಡಿಕೆಯ ಪ್ರಕಾರ  ಕೋವಿಡ್ ಸೋಂಕಿತರಿಗೆ  ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಬೆಡ್‍ಗಳನ್ನು ಮೀಸಲಿಡಲು ಸೂಚನೆ ನೀಡಲಾಗಿತ್ತು.

ಆದರೆ ಕೆಲ ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದೆ. ಈಗಾಗಲೇ ಬೆಂಗಳೂರಿನ ವಿಕ್ರಂ ಆಸ್ಪತ್ರೆ ಮೇಲೆ ಕ್ರಮ ತೆಗೆದುಕೊಂಡಿದೆ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ