ಅದರಂತೆ ಕಾಂಗ್ರೆಸ್ ನಾಯಕರು ವಿಧಾನಸಭೆಯ ಗಾಂಧಿ ಪ್ರತಿಮೆಯಿಂದ ರಾಜಭವನದತ್ತ ಕಾಲ್ನಡಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ದೋಸ್ತಿ ಕ್ಷಣ ಎಲ್ಲರ ಗಮನ ಸೆಳೆಯಿತು. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ವೇಳೆ ಅಕ್ಕ-ಪಕ್ಕ ಕೂತಿದ್ದ ಈ ಇಬ್ಬರು ನಾಯಕರು ನಗು, ತಮಾಷೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.
ರಾಜಭವನದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಬಿಜೆಪ ನಾಯಕರಾದ ಜನಾರ್ಧನ ರೆಡ್ಡಿ, ಯಡಿಯೂರಪ್ಪ, ಜೆಡಿಎಸ್ ನ ಕುಮಾರಸ್ವಾಮಿ ಮೇಲೆ ಸಾಕಷ್ಟು ಪ್ರಕರಣಗಳಿವೆ. ಆ ಪ್ರಕರಣಗಳ ಬಗ್ಗೆ ಮೌನವಾಗಿರುವ ರಾಜ್ಯಪಾಲರು ಈಗ ಸಿದ್ದರಾಮಯ್ಯ ವಿರುದ್ಧ ನಿಯಮ ಉಲ್ಲಂಘಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದ ಯಾಕೆ? ರಾಜ್ಯಪಾಲರ ಈ ಪಕ್ಷಪಾತಿ ಧೋರಣೆ ವಿರೋಧಿಸಿ ನಾವು ಹೋರಾಟ ನಡೆಸುತ್ತಿದ್ದೇವೆ ಎಂದರು.