ವರಿಷ್ಠರ ಜೊತೆ ಸಿದ್ದರಾಮಯ್ಯ,ಡಿಕೆಶಿ ರಣತಂತ್ರ ಸಭೆ!
ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸೇರಿದಂತೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ.