ಈ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರು ತಮ್ಮ ಕಾಲೇಜು ದಿನಗಳನ್ನು ನೆನೆದು ಭಾವುಕರಾದರು. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಅವರು ಭಾವುಕರಾಗಿ ಹಳೆಯ ದಿನಗಳ ಬಗ್ಗೆ ಬರೆದುಕೊಂಡಿದ್ದಾರೆ.
'ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು' ಎಂದು ಹಳೆಯ ದಿನಗಳ ಬಗ್ಗೆ ಹೇಳಿಕೊಂಡಿದ್ದಾರೆ.