ರಾಜ್ಯಪಾಲರ ವಿರುದ್ಧ ಬೀದಿಗಿಳಿದ ಸಿದ್ಧರಾಮಯ್ಯ ಅಭಿಮಾನಿಗಳು: ಸರ್ಕಾರ ಅಸ್ಥಿರಗೊಳಿಸಲು ಯತ್ನ ಎಂದು ಆಕ್ರೋಶ

Sampriya

ಭಾನುವಾರ, 18 ಆಗಸ್ಟ್ 2024 (13:34 IST)
Photo Courtesy X
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ಯಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಕ್ಕೆ ಇಂದು ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸಕ್ಕಾಗದೆ ಈ ಪಿತೂರಿಯನ್ನು ಮಾಡಿದೆ. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರ ನಡೆ ಸರಿಯಲ್ಲ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಹಾಗೂ ಆ ಮೂಲಕ ಜನಪರ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ದೇಶದ ರಾಜಕೀಯ ಇತಿಹಾಸದಲ್ಲೇ ರಾಜ್ಯಪಾಲರೊಬ್ಬರು ಪ್ರಾಮಾಣಿಕ ಮುಖ್ಯಮಂತ್ರಿ ಹಾಗೂ ನಿರಪರಾಧಿಯನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕುತಂತ್ರಕ್ಕೆ ತಲೆಬಾಗಿ ಅನುಮತಿ ನೀಡಿರುವುದು ಅತ್ಯಂತ ದುರದೃಷ್ಟಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತಿಳಿಸಿದ್ದಾರೆ.

ಇನ್ನೂ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಸಿದ್ದರಾಮಯ್ಯ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ