ಆನ್ ಲೈನ್ ಶಿಕ್ಷಣಕ್ಕೆ ಸಿದ್ದರಾಮಯ್ಯ ಫುಲ್ ಗರಂ
ಆನ್ ಲೈನ್ ಶಿಕ್ಷಣ ಆರಂಭಿಸಲು ಚಿಂತನೆ ನಡೆಸಿರುವ ಕೇಂದ್ರ ಸರಕಾರದ ನಡೆಗೆ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಪ್ರಸ್ತಾವಕ್ಕೆ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಭಾರತದ ಅಸ್ವಿತ್ವ ಇರುವುದು ಹಳ್ಳಿಗಳಲ್ಲಿ. ಗ್ರಾಮೀಣ ಭಾಗದಲ್ಲಿ ಕಂಪ್ಯೂಟರ್, ಲ್ಯಾಪಟಾಪ್, ಸ್ಮಾರ್ಟ್ ಫೋನ್ ಗಳು ಎಲ್ಲಿಂದ ಬರಬೇಕು ಎಂದು ಟ್ವಿಟ್ ಮಾಡಿದ್ದಾರೆ.
ಮೊಬೈಲ್ ಗಳಿದ್ದರೂ ನೆಟ್ ವರ್ಕ್ ಎಲ್ಲಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು, ಕೇಂದ್ರ ಸರಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.