ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕ್ಲೀನ್ ಚಿಟ್ ಕೊಡಿಸುವುದು, ತನಗೆ ತಾನೇ ಭಾರತ ರತ್ನ ಕೊಟ್ಟಂತೆ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿತ್ತು.
ಲೋಕಾಯುಕ್ತ ವರದಿ ಬಗ್ಗೆ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಸಾರ್ವಜನಿಕರಿಂದಲೂ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ಅಧೀನದಲ್ಲೇ ಇರುವ ಲೋಕಾಯುಕ್ತ ಅಧಿಕಾರಿಗಳು ಇದೇ ವರದಿ ಕೊಡುತ್ತಾರೆಂಬುದು ನಿರೀಕ್ಷಿತ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿ ನಾಯಕರು ಕಿಡಿ ಕಾರಿದ್ದರು.
ಇನ್ನು, ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಈ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಅದರಲ್ಲಿ ಕೆಲವರು ಭಾರತ ರತ್ನ ತನಗೆ ತಾನೇ ಕೊಟ್ಟುಕೊಂಡಂತೆ ಎಂದು ವ್ಯಂಗ್ಯ ಮಾಡಿದ್ದಾರೆ. ನಿಮ್ಮದೇ ಸರ್ಕಾರ ನಿಮ್ಮದೇ ವರದಿ ಇದನ್ನೆಲ್ಲಾ ನಂಬಕ್ಕಾಗುತ್ತಾ ಎಂದು ಮತ್ತೆ ಕೆಲವರು ಕಾಮೆಂಟ್ ಮಾಡಿದ್ದಾರೆ.