ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಕಿದ್ದಾರೆ : ಸಿಎಂ

ಸೋಮವಾರ, 22 ಆಗಸ್ಟ್ 2022 (09:31 IST)
ಹಾವೇರಿ : ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಅನ್ನೋ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.
 
ಅವರಿಗೆ ನಿಜವಾಗಿಯೂ ಜೀವ ಬೆದರಿಕೆ ಇದೆಯೇ ಅನ್ನೋದರ ಬಗ್ಗೆ ಸೂಕ್ತ ತನಿಖೆ ಮಾಡ್ತೀವಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ಗೂ ಜೀವ ಬೆದರಿಕೆ ಇದೆಯೇ ಅನ್ನೋದನ್ನ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಐತಿಹಾಸಿಕ ಪುರುಷರ ಬಗ್ಗೆ ಎಲ್ಲಾ ಕಾಲದಲ್ಲೂ ಚರ್ಚೆ ನಡೆಯುತ್ತಲೇ ಇದೆ. ಇಂದಿರಾ ಗಾಂಧಿಯವರೇ ಸಾವರ್ಕರ್ರನ್ನ ದೇಶದ ಶ್ರೇಷ್ಠ ಪುತ್ರ ಅಂದಿದ್ದರು. ಅದು ದಾಖಲೆಗಳಲ್ಲಿದೆ. ಟಿಪ್ಪು ಸುಲ್ತಾನ್ ಬಗ್ಗೆ ವಿವಾದ ಇದೆ.

ಸುಮ್ಮನೆ ಜನರಲ್ಲಿ ಗೊಂದಲ ಸೃಷ್ಟಿಸಿ ಒಂದು ವರ್ಗಕ್ಕೆ ನೋವುಂಟು ಮಾಡಬಾರದು. ಸಮಾಜದಲ್ಲಿ ಶಾಂತಿಯಿಂದಿರಬೇಕು. ದೇಶದಲ್ಲಿನ ಸವಾಲುಗಳನ್ನು ಹೇಗೆ ಎದುರಿಸಬೇಕು ಅನ್ನೋದರ ಬಗ್ಗೆ ಚರ್ಚೆಗಳು ನಡೆಯಬೇಕು ಎಂದು ಸಲಹೆ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ