ಮತ್ತೆ ಸಿದ್ದರಾಮಯ್ಯ ಅವರೇ ಬರಬೇಕಾಯಿತು

ಬುಧವಾರ, 7 ಜೂನ್ 2023 (17:31 IST)
ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ಜಮೀರ್ ಅಹಮದ್, "ಹಜ್ ಭವನದ ನವೀಕರಣಕ್ಕೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಸರ್ಕಾರದ ಕೊನೆ ದಿನಗಳಲ್ಲಿ 5 ಕೋಟಿ  ಘೋಷಿಸಿದರು. ಆದರೆ ನಂತರ ಬಂದ ಸರ್ಕಾರಗಳು ಈ ಹಣ ಕೊಡಲಿಲ್ಲ. ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಗೆದ್ದು ಬಂದು ಆ ಹಣ ನೀಡಿದ್ದಾರೆ. ಇದೇ ರೀತಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸಮುದಾಯದ ಪ್ರಗತಿಗೆ 5 ಸಾವಿರ ಕೋಟಿ ಅನುದಾನವನ್ನು ತಮ್ಮ ಅವಧಿಯಲ್ಲಿ ನೀಡಬೇಕು. ಸಮಾಜದ ಹಿರಿಯರು ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ. ನುಡಿದಂತೆ ನಡೆಯುವ ಸಿದ್ದರಾಮಯ್ಯ ಅವರು ಈ ಭರವಸೆಯನ್ನೂ ಈಡೇರಿಸುತ್ತಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ