ಸಿಎಂ ಆಗಿ ಸಿದ್ದರಾಮಯ್ಯನವರು ಉತ್ತಮ ಕೆಲಸ ಮಾಡುತ್ತಿದ್ದಾರೆ: ಸಿದ್ಧಲಿಂಗ ಸ್ವಾಮೀಜಿ
ಸಮಾಜವಾದಿ ಚಿಂತನೆಯ ಅವರ ಮೇಲೆ ಬಸವಾದಿ ಶರಣರ ಪ್ರಭಾವ ಸಾಕಷ್ಟಿದೆ. ಜಾತ್ರೆಗಳು ಜನರನ್ನು ಒಗ್ಗೂಡಿಸುವಲ್ಲಿ, ಭಕ್ತಿ, ಅರ್ಚನಾ ಮನೋಭಾವ ಬೆಳೆಸುವಲ್ಲಿ ಹಾಗೂ ಸಾಮರಸ್ಯ ಮೂಡಿಸುವಲ್ಲಿ ಸಹಕಾರಿಯಾಗಿವೆ ಎಂದು ಹೇಳಿದರು.
ಸಂವಿಧಾನ ನಮ್ಮನ್ನು ಒಗ್ಗೂಡಿಸುತ್ತದೆ ಎಂಬುದನ್ನು ಎಲ್ಲರೂ ಒಪ್ಪಬೇಕು. 12ನೇ ಶತಮಾನದಲ್ಲಿ ಬಸವಣ್ಣ ಅವರು ನೀಡಿರುವುದು ಮಾನವೀಯ ಸಂವಿಧಾನ. ಭಾರತೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕಾದರೆ ಸಂವಿಧಾನವನ್ನು ಗೌರವಿಸಬೇಕು. ರಾಷ್ಟ್ರ ಲಾಂಛನಗಳನ್ನು ಗೌರವಿಸಬೇಕು ಎಂದು ಕರೆ ನೀಡಿದರು.