ಸಿದ್ದರಾಮಯ್ಯನವರೇ 5ವರ್ಷ ಸಿಎಂ, ಈ ಬಗ್ಗೆ ಚರ್ಚೆ ಅನವಶ್ಯಕ: ಜಮೀರ್ ಅಹ್ಮದ್
ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ನಡುವಿನ ಜಗಳ ಬಿಜೆಪಿ ಆಂತರಿಕ ವಿಚಾರ. ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಯಾರೂ ಆಹ್ವಾನಿಸಿಲ್ಲ. ಅಷ್ಟಕ್ಕೂ ಅವರು ಬರುವುದೂ ಇಲ್ಲ. ಇದೆಲ್ಲ ಅವರಿಬ್ಬರ ನಾಟಕ. ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳಲು, ಕಾಂಗ್ರೆಸ್‌ನಿಂದ ಆಹ್ವಾನ ಇದೆ ಎಂದು ಶ್ರೀರಾಮುಲು ಹೇಳಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು