ಮೀಸಲಾತಿ ಎಲೆಕ್ಷನ್ ಗಿಮಿಕ್ ಎಂದ ಸಿದ್ದರಾಮಯ್ಯ

ಬುಧವಾರ, 9 ಜನವರಿ 2019 (14:50 IST)
ಎಂಪಿ ಚುನಾವಣೆ ಹತ್ತಿರ ಬರುತ್ತಿರುವಂತೆ ಬಿಜೆಪಿಯವರು ಗಿಮಿಕ್ ಶುರುವಿಟ್ಟುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.   

ಮೇಲ್ವರ್ಗದ ಬಡವರಿಗೆ ಶೇ. 10 ರಷ್ಟು ಮೀಸಲಾತಿ ನೀಡಬೇಕೆಂದು ಮಂಡಿಸಿರುವ ಮಸೂದೆಯು ಬಿ.ಜೆ.ಪಿ. ಚುನಾವಣಾ ಗಿಮಿಕ್ ಅಲ್ಲದೆ ಬೇರೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಮೇಲ್ವರ್ಗದ ಬಡವರಿಗೆ ಮೀಸಲಾತಿಯನ್ನು ನೀಡುವ ಬಗ್ಗೆ ಬಿ.ಜೆ.ಪಿ.ಯವರು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಹಿಂದೆ ಮೀಸಲಾತಿಯನ್ನು ವಿರೋಧಿಸುತ್ತಿದ್ದವರೇ ಈಗ ಮಸೂದೆ ಮಂಡಿಸಲು ಮುಂದಾಗಿರುವುದನ್ನು ನೋಡಿದರೆ ಬಹುಶಃ ಮುಂದಿನ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ರೀತಿ ಘೋಷಿಸಿದ್ದೇ ಆದಲ್ಲಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಬಹುದೆಂದು ಆಕಾಂಕ್ಷೆಯಿಂದ ರೀತಿ ಮಸೂದೆಯನ್ನು ಮಂಡಿಸಿದ್ದಾರೆ ವಿನಃ ಬೇರೆನೂ ಇಲ್ಲ ಎಂದರು.

ರಾಜ್ಯದಲ್ಲಿನ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತಂತೆ ಲೋಕೋಪಯೋಗಿ ಸಚಿವ ರೇವಣ್ಣನವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯನವರು, ಮುಂದಿನ ವಾರ ನಡೆಯುವ ಸಮನ್ವಯ ಸಮಿತಿ ಸಭೆಯಲ್ಲಿ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ