ಸಿದ್ದರಾಮಯ್ಯ ಕ್ಷಮೆ ಕೇಳಲಿ ಎಂದ ಬಿ.ಎಸ್.ವೈ
ಗದಗಿನ ತೋಂಟದಾರ್ಯ ಮಠದ 19ನೇ ಪಿಠಾಧಿಪತಿಗಳಾದ ಸಿದ್ಧಲಿಂಗ ಸ್ವಾಮೀಜಿಗಳು ನಿಧನರಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗದಗನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದರು.
ಉಪ ಚುನಾವಣಾ ಕುರಿತು ಮಾತನಾಡಿದ ಅವರು, 5 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು. ಈ ಸಂದರ್ಭದಲ್ಲಿ ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ 420 ಪದ ಬಳಕೆ ವಿಚಾರ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವ್ರ ಬಾಯಲ್ಲಿ ಇಂಥ ಮಾತು ನಿರೀಕ್ಷೆ ಮಾಡಿರಲಿಲ್ಲ. ರಾಮುಲು ವಿರುದ್ಧ 420 ಪದ ಬಳಕೆ ಇಡೀ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದಂತಾಗಿದೆ. ಮೊದಲು ಅವರು ಕ್ಷಮೆ ಕೇಳಲಿ ಎಂದು ಆಗ್ರಹ ಮಾಡಿದರು.