ಅಮಿತ್ ಶಾ ಮೀಸಲಾತಿ ಪ್ರಶ್ನೆಗೆ ತಿರಗೇಟು ನೀಡಿದ ಸಿದ್ದರಾಮಯ್ಯ
ಮೀಸಲಾತಿ ಹೆಚ್ಚಿಸುವ ಮೂಲಕ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹೆಚ್ಚು ಮೀಸಲಾತಿ ನೀಡುತ್ತೇವೆ ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ ಎಂದು ಕೇಂದ್ರ ಗೃಹ ಸಚಿವ ಅಮಿತ್ ಅವರ ಹೇಳಿಕೆ ವಿಚಾರವಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಜಾತಿ-ಜಾತಿ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಷ್ಟು ಕರ್ನಾಟಕದ ಜನತೆ ದಡ್ಡರಲ್ಲ. ಈ ರಾಜ್ಯದ ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಮಹಾ ಜನತೆ ಕಿತ್ತು ತಿನ್ನುವ ದುಷ್ಟರಲ್ಲ, ಹಂಚಿ ತಿನ್ನುವ ಔದಾರ್ಯ ಸಜ್ಜನರು ಎನ್ನುವುದನ್ನು ಅಮಿತ್ ಶಹಾ ಅವರಿಗೆ ವಿನಮ್ರವಾಗಿ ತಿಳಿಸಬಯಸುತ್ತೇನೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ ಎಂದು ಅಮಿತ್ ಶಾ ಗೆ ತಿರಗೇಟು ನೀಡಿದ್ದಾರೆ