ದೇವೇಗೌಡರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ
ಸೋಮವಾರ, 15 ಜನವರಿ 2018 (15:58 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತರಲ್ಲಿ ಒಬ್ಬರಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ಪಕ್ಷದ ವರಿಷ್ಠ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡ ಅವರ ನಿವಾಸದಲ್ಲಿ ಅಂದಾಜು ಮುಕ್ಕಾಲು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜಕೀಯ ವಿದ್ಯಾಮಾನಗಳ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಇಬ್ರಾಹಿಂ ಅವರು, ಮಕರ ಸಂಕ್ರಾಂತಿ ಹಬ್ಬವಾದ್ದರಿಂದ ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ಶುಭಾಶಯ ಕೋರಲು ಬಂದಿದ್ದೆ. ಜೆಡಿಎಸ್ ಸೇರ್ಪಡೆಯ ಬಗ್ಗೆ ಚರ್ಚೆ ನಡೆದಿಲ್ಲ. ಜೆಡಿಎಸ್‌ನೊಂದಿಗೆ ಮೈತ್ರಿ ವಿಚಾರ ಕಾಂಗ್ರೆಸ್ ಹೈಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.