ಗುರುಮಿಠಕಲ್‍ನಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮಲೇಷಿಯಾದಿಂದ ಮರಳು ತರಿಸುತ್ತಿದೆ. ಸಿಮೆಂಟ್‍ಗೂ ಅಧಿಕ ಬೆಲೆ ಮರಳಿಗೆ ನಿಗದಿ ಮಾಡುವ ಮೂಲಕ ಹಗಲು ದರೋಡೆ ನಡೆಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ಸುಲಿಗೆ ಹೆಚ್ಚಿದೆ ಎಂಬುದನ್ನು ಅಪರಾಧಾ ತನಿಖಾ ಸಂಸ್ಥೆ ಬಹಿರಂಗಪಡಿಸಿದೆ. ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತದಲ್ಲಿ ರೇಪ್ ಸಿಟಿಯಾಗಿದೆ ಎಂದು ದೂರಿದ್ದಾರೆ.