ಸಿದ್ದರಾಮಯ್ಯನ ಹಿಟ್ಲರ್ ವರ್ತನೆಯಿಂದ ಕಾಂಗ್ರೆಸ್‍‍ಗೆ ಮುಳುವು- ವರ್ತೂರು ಪ್ರಕಾಶ

ಬುಧವಾರ, 13 ಡಿಸೆಂಬರ್ 2017 (13:56 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಟ್ಲರ್ ವರ್ತನೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ ಎಂದು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ವರ್ತೂರು ಪ್ರಕಾಶ ಹೇಳಿದ್ದಾರೆ.

ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗದವರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸಿದ್ದರಾಮಯ್ಯ ಅವರ ಸಾಮಾಜಿಕ ಬದ್ದತೆ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ಅವರು ಹಿಟ್ಲರ್‍‍ನಂತೆ ವರ್ತನೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
 
ಸಿದ್ದರಾಮಯ್ಯ ಅವರ ಹಿಟ್ಲರ್‍‍ ವರ್ತನೆಯಿಂದ ಬೇಸತ್ತು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಸೇರಿದಂತೆ ಇತರರು ಪಕ್ಷ ತೊರೆದಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 30-40 ಸ್ಥಾನಗಳು ಗಳಿಸುವುದು ಕಷ್ಟವಿದೆ ಎಂದು ವ್ಯಂಗವಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ