ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಪ್ರತಿ ಕ್ಷೇತ್ರಕ್ಕೆ 100 ಕೋಟಿ ಖರ್ಚು ಮಾಡಿದೆ ಎಂದ ಸಿದ್ದರಾಮಯ್ಯ
ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿಯವರು ಪ್ರತಿ ಒಂದೊಂದು ಕ್ಷೇತ್ರಕ್ಕೂ 100 ಕೋಟಿ ರೂ. ಹಣ ಖರ್ಚು ಮಾಡಿದ್ದಾರೆ. ಹೀಗಂತ ಮಾಜಿ ಸಿಎಂ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಯವರು ಒಂದೊಂದು ಕ್ಷೇತ್ರದಲ್ಲಿ 100 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ.
ರಾಜ್ಯದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನಗಳೇ ಕಳೆದರೂ ಇನ್ನೂ ಟೇಕ್ ಆಫ್ ಆಗಿಲ್ಲ. ಸರ್ಕಾರದ ಎಷ್ಟೋ ಖಾತೆಗಳಿಗೆ ಸಚಿವರೇ ಇಲ್ಲ. ಎಲ್ಲ ಖಾತೆಗಳನ್ನು ಸಿಎಂ ಅವರೇ ಇಟ್ಟುಕೊಂಡಿದ್ದಾರೆ.
ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂದಿದ್ದಾರೆ.