ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

Krishnaveni K

ಮಂಗಳವಾರ, 1 ಜುಲೈ 2025 (17:15 IST)
ಬೆಂಗಳೂರು: ಯಾವ ಚಾನೆಲ್ ಗಳು ನನ್ನ ಬಗ್ಗೆ ಏನೇ ಸುಳ್ಳು ಸುದ್ದಿ ಹಾಕಿದ್ರೂ ಫೋನ್ ಮಾಡಿ ಕೇಳುವವನಲ್ಲ ನಾನು. ಪತ್ರಿಕಾ ರಂಗ ನಿರ್ಭೀತಿಯಿಂದ ಕೆಲಸ ಮಾಡಬೇಕು ಎಂಬುದೇ ನನ್ನ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಪತ್ರಿಕಾ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ನಡೆದ "ಪತ್ರಿಕಾ ದಿನಾಚರಣೆ-2025" ಹಾಗೂ "ನಿಜ ಸುದ್ದಿಗಾಗಿ ಸಮರ" ಸಂವಾದದಲ್ಲಿ ಮಾತನಾಡಿದ ಅವರು ‘ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ’ ಎಂದರು.

ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡಿ ಪ್ರಶ್ನೆ ಮಾಡುವವನಲ್ಲ ಎಂದರು.

ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು. ಇಂದು ಪ್ರಜಾಪ್ರಭುತ್ವದ ಉಳಿವಿಗಾಗಿ ಶ್ರಮಿಸಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ