ಅಂಬೇಡ್ಕರ್ ಸೋಲಿಸಿದ್ದು ಆರ್ ಎಸ್ಎಸ್ ಎಂದು ನಾವು ಜನರಿಗೆ ಅರ್ಥ ಮಾಡಿಸಬೇಕು: ಸಿದ್ದರಾಮಯ್ಯ

Krishnaveni K

ಶುಕ್ರವಾರ, 18 ಜುಲೈ 2025 (16:37 IST)
ಬೆಂಗಳೂರು: ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಆರ್‌ಎಸ್‌ಎಸ್‌ನ ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ಪತ್ರ ಬರೆದಿದ್ದಾರೆ. ಇದನ್ನು ಯುವ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಅರ್ಥ ಮಾಡಿಸುವ ಕೆಲಸವನ್ನು ಕಾಂಗ್ರೆಸ್ ಸೇನಾನಿಗಳು ಮಾಡಬೇಕು.

ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ ಪ್ರತಿಜ್ಞೆ 2025" ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯುವ ಕಾಂಗ್ರೆಸ್ ಚುನಾವಣೆ ಮುಗಿದ ಮೇಲೆ ಮುಗಿಯಿತು. ಗೆದ್ದವರು, ಸೋತವರೆಲ್ಲಾ ಒಟ್ಟಾಗಿ ಹೋಗಬೇಕು. ಗುಂಪುಗಾರಿಕೆ ಬೇಡ, ಒಬ್ಬ ನಾಯಕರ ಹಿಂದೆ ಹೋಗಬಾರದು. ಸಿದ್ಧಾಂತವೇ ನಾಯಕತ್ವ. ಸಿದ್ಧಾಂತದ ಜೊತೆಗೆ ನೀವೆಲ್ಲಾ ಇರಬೇಕು.

ಅಧಿಕಾರದಲ್ಲಿದ್ದಾಗ ಮೈಸೂರಿಗೆ ಏನಾದ್ರೂ ಮಾಡಿದ್ರಾ? ಇಲ್ಲಿರುವ ಮಹಾರಾಣಿ ಕಾಲೇಜು, ಜಿಲ್ಲಾ ಆಸ್ಪತ್ರೆ, ಜಯದೇವ ಆಸ್ಪತ್ರೆ ಸೇರಿ ಇಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮಿಂದ ಆಗಿದ್ದು. ನಾನು ಮುಖ್ಯಮಂತ್ರಿಯಾಗಿರುವಾಗ ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿ ಮಾಡಿದ್ದೇ ಹೊರತು ಬುರುಡೆ ಬಿಜೆಪಿ‌ ಮಾಡಿದ್ದೇನೂ ಇಲ್ಲ.

ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ನಮ್ಮ ಜೊತೆ ಒಂದೇ ವೇದಿಕೆಯಲ್ಲಿ‌ ಬಹಿರಂಗ ಚರ್ಚೆಗೆ ಬರಲಿ. ನಾನೇ ಬರುತ್ತೇನೆ. ಈ ಸವಾಲನ್ನು‌ ಬಿಜೆಪಿ‌ ಸ್ವೀಕರಿಸಲು ಸಿದ್ಧವಿಲ್ಲ ಏಕೆ? ಬಿಜೆಪಿ ಏನೂ ಕೆಲಸ ಮಾಡದೆ ಕೇವಲ ಬರೀ  ಬುರುಡೆ ಬಿಡುತ್ತದೆ. ಬಿಜೆಪಿಯವರು ಕೆಲಸ ಮಾಡಿದ ಸಾಕ್ಷಿ ಗುಡ್ಡೆ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ