ತೆರಿಗೆ ಬಳಿಕ ನಬಾರ್ಡ್ ಸಾಲದಲ್ಲೂ ಕೇಂದ್ರದಿಂದ ನಮಗೆ ಅನ್ಯಾಯವಾಗಿದೆ: ಸಿದ್ದರಾಮಯ್ಯ ಗರಂ

Krishnaveni K

ಸೋಮವಾರ, 18 ನವೆಂಬರ್ 2024 (11:13 IST)
ನವದೆಹಲಿ: ಇಷ್ಟು ದಿನ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಹೋರಾಟವನ್ನೇ ಮಾಡಿದ ಸಿಎಂ ಸಿದ್ದರಾಮಯ್ಯ ಈಗ ನಬಾರ್ಡ್ ಸಾಲದಲ್ಲೂ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಬಾರ್ಡ್ ಸಾಲದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯವಾಗಿದೆ ಎಂದು ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸುವಂತೆ ಕರೆ ನೀಡಿದ್ದಾರೆ. ಕಳೆದ ವರ್ಷ 5,600 ಕೋಟಿ ರೂ. ಸಾಲ ನೀಡಿತ್ತು. ಆದರೆ ಈ ಬಾರಿ ಕೇವಲ 2,340 ಕೋಟಿ ರೂ. ಮಾತ್ರ ಸಾಲ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದಿಂದ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯವಾಗಿದೆ. ತೆರಿಗೆ ಬಳಿಕ ನಬಾರ್ಡ್ ನಲ್ಲೂ ಅನ್ಯಾಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 3650 ಕೋಟಿ ರೂ. ಕಡಿತವಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಸಾಲದ ಮೊತ್ತ ಕಡಿತ ಮಾಡಿರುವುದರಿಂದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಡಲು ಕಷ್ಟವಾಗುತ್ತಿದೆ. ಪ್ರಧಾನಿ ಮೋದಿ, ವಿತ್ತ ಸಚಿವರಿಗೆ ನಾನು ಪತ್ರ ಬರೆದಿದ್ದೇನೆ. ನೀವೂ ಎಲ್ಲರೂ ಬರೆದು ಬೆಂಬಲಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ. ರೈತರ ಬಗ್ಗೆ ಉದ್ದುದ್ದ ಮಾತನಾಡುವ ಬಿಜೆಪಿಯಿಂದಲೇ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ