ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನಲೆ ಕಾಂಗ್ರೆಸ್ ನ ನಾಯಕ ಸಿದ್ದರಾಮಯ್ಯ ತುಂಬಾ ಚಿಂತೆಗಿಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ವಾಪಸ್ ಹೋಗುತ್ತಿದ್ದ ವೇಳೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ಯಾರಿಗೋ ಫೋನ್ ಮಾಡಿ ಮಾತನಾಡುವಂತೆ ಅವರಿಗೆ ಕೊಟ್ಟಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ಸಿದ್ದರಾಮಯ್ಯ ಅವರು ಮೊಬೈಲ್ ತಳ್ಳಿ, ಆತನ ಕೆನ್ನೆಗೆ ಬಾರಿಸಿ, ನಡಿಯೋ ಎಂದು ಕರೆದೊಯ್ದಿದ್ದಾರೆ.
ಸದ್ಯ ಎಲ್ಲರ ಸಮ್ಮುಖದಲ್ಲಿ ಕಾರ್ಯಕರ್ತನ ಕೆನ್ನಗೆ ಬಾರಿಸಿದ ಈ ವಿಡಿಯೋ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಡಿಕೆಶಿ ಬಂಧನ ಸಿದ್ದರಾಮಯ್ಯ ಚಿಂತೆಗೀಡು ಮಾಡಿದೆ ಎನ್ನಲಾಗಿದೆ.