ಪರಮೇಶ್ವರ್ ನಿವಾಸ, ಕಾಲೇಜಿನ ಮೇಲೆ ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಕಿಡಿ

ಗುರುವಾರ, 10 ಅಕ್ಟೋಬರ್ 2019 (11:04 IST)
ಬೆಂಗಳೂರು : ಡಾ. ಜಿ ಪರಮೇಶ್ವರ್ ನಿವಾಸ, ಕಾಲೇಜು ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.




ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗ್ತಿದೆ. ಚುನಾವಣೆ ಸಂದರ್ಭದಿಂದಲೂ ಹೀಗೆ ಮಾಡಲಾಗುತ್ತಿದೆ. ರಾಜಕೀಯ ದುರುದ್ದೇಶದಿಂದಲೇ ಹೀಗೆ ಮಾಡಿರಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಬಿಜೆಪಿ ನಾಯಕರ ಮೇಲೆ ಯಾಕೆ ಐಟಿ ದಾಳಿ ಮಾಡಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ