ಶಿಕ್ಷಕರ ದಿನಕ್ಕೆ ಸಿದ್ದರಾಮಯ್ಯ ವಿಶೇಷ ಲೇಖನ

ಮಂಗಳವಾರ, 5 ಸೆಪ್ಟಂಬರ್ 2023 (19:56 IST)
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಿಎಮ್ ಸಿದ್ದರಾಮಯ್ಯ ವಿಶೇಷ ಲೇಖನ ಬರೆದಿದ್ದು,ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದರೂ, ತನಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ. ಮರೆಯಬಾರದೂ ಕೂಡಾ. ನನ್ನ ಬದುಕಿನಲ್ಲಿ ರಾಜಪ್ಪ ಮೇಷ್ಟ್ರು ಬರದೆ ಹೋಗಿದ್ದರೆ ಬಹುಶಃ ನಾನು ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಿರಲಿಲ್ಲ. ನನ್ನ ಮೊದಲ ಶಿಕ್ಷಕ ನಂಜೇಗೌಡರು. ಅವರು ನನಗೆ ವೀರಮಕ್ಕಳ ಕುಣಿತ ಕಲಿಸುತ್ತಿದ್ದರು. ಒಂದು ದಿನ ನಮ್ಮೂರಿನ ರಾಜಪ್ಪ ಮೇಷ್ಟ್ರ ಕಣ್ಣಿಗೆ ನಾನು ಬಿದ್ದೆ. ಅವರು ನನ್ನನ್ನು ಶಾಲೆಗೆ ಕರೆದುಕೊಂಡು ಹೋದರು, ಅಲ್ಲಿ ಹಲವಾರು ವಿಷಯಗಳ ಬಗ್ಗೆ ಉಕ್ತಲೇಖನ ಕೊಟ್ಟರು. ನಾನು ಸರಿಯಾಗಿ ಉತ್ತರಿಸಿ ಪಾಸಾದೆ. ಅವರು ಖುಷಿಪಟ್ಟು ನೇರವಾಗಿ ನನ್ನನ್ನು ಐದನೇ ತರಗತಿಗೆ ಸೇರಿಸಿದರು. ಅವರಿಂದಾಗಿ ನಾನು ಈಗಿನ ಸ್ಥಾನದಲ್ಲಿದ್ದೇನೆ, ಆ ಪುಣ್ಯಾತ್ಮನನ್ನು ನಾನು ಸದಾ ಗೌರವದಿಂದ ಸ್ಮರಿಸುತ್ತೇನೆ ಎಂದು ಬರೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ