‘ಸಿದ್ದರಾಮಯ್ಯ ಸಂಡೇ-ಮಂಡೇ ಲಾಯರ್

ಮಂಗಳವಾರ, 17 ಮೇ 2022 (21:00 IST)
ಮತಾಂಧರ ಓಲೈಕೆಯನ್ನ ಬಂಡವಾಳ ಮಾಡಿಕೊಂಡು ಬಂದಿದ್ದೀರ..ನಿಮ್ಮಿಂದ ನಾವು ಸಂವಿಧಾನದ ಪಾಠ ಕಲಿಯಬೇಕಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿರಾಜಪೇಟೆ ಶಾಸಕ ಬೋಪಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಸಂಡೇ-ಮಂಡೇ ಲಾಯರ್ ಎಂದು ಟ್ವೀಟ್ ಮಾಡಿರುವ ಬೋಪಾಯ್ಯ, ನಿಮ್ಮಿಂದ ಕಾನೂನಿನ ಪಾಠ ಅಗತ್ಯವಿಲ್ಲ..ಬಡ ರೈತರ ಕೊಟ್ಟಿಗೆಗಳಿಗೆ ನುಗ್ಗಿ ಬೆದರಿಸಿ ಗೋವುಗಳನ್ನು ಕದ್ದಿಲ್ಲ. ತಲ್ವಾರ್, ಬಂದೂಕು ಹಿಡಿದು ಬಲವಂತದ ಮತಾಂತರ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ..ಬಂದೂಕು ಹಿಡಿದು ಪಾರ್ಲಿಮೆಂಟ್ ಮೇಲೆ ದಾಳಿ ಮಾಡಿದ ಅಥವಾ ಭಯೋತ್ಪಾದಕರಾದ ಉದಾಹರಣೆಯಿಲ್ಲ..ಬಡಮಕ್ಕಳ ಕೈಗೆ ಬಂದೂಕು ನೀಡಿ ಕಾಡಿಗೆ ಕಳುಹಿಸಿ ರಕ್ತ ಹರಿಸಿಲ್ಲ ಎಂದು ಟ್ವೀಟ್ ಮೂಲಕ ಶಾಸಕ ಬೋಪಯ್ಯ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ